
ಮುಳಬಾಗಿಲು :ಪಿಚ್ಚಗುಂಡ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಭಾಸ್ಕರ್ ರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಭಾಸ್ಕರ್ ರೆಡ್ಡಿ, ಹಾಲು ಡೈರಿಯಲ್ಲಿ ರಾಜಕೀಯ ಬೆರೆಸದೆ ಎಲ್ಲಾ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರಲ್ಲದೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೆ ಸಾಕಾರ ನೀಡಿದ ಎಲ್ಲಾ ನಿರ್ದೇಶಕರಿಗೂ ಹಾಗೂ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.
ನಿರ್ದೇಶಕರಾದ ಪ್ರಭಾಕರ್ ರೆಡ್ಡಿ, ಸುಬ್ಬಾರೆಡ್ಡಿ, ಶ್ರೀರಾಮೇಗೌಡ, ಸುಬ್ರಮಣಿ, ಶ್ರೀನಿವಾಸ್, ಅಶ್ವಥಮ್ಮ, ಸರೋಜಮ್ಮ , ರಾಮಕೃಷ್ಣಪ್ಪ, ಕಾರ್ಯದರ್ಶಿ ರಘುರಾಮ್ ರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.