
- ಮುಳಬಾಗಿಲು: ಕ್ಯಾನ್ಸರ್ ರೋಗಕ್ಕೆ ಪ್ರಾಥಮಿಕ ಹಂತದಲ್ಲಿಯೇ ನುರಿತ ವೈದ್ಯರಿಂದ ಚಿಕಿತ್ಸೆ ಪಡೆದುಕೊಂಡರೆ ಗುಣಮುಖರಾಗಬಹುದು ಎಂದು ಜೆಡಿಎಸ್ ಮುಖಂಡ ಎಂ.ಗೊಲ್ಲಹಳ್ಳಿ ಪ್ರಭಾಕರ್ ತಿಳಿಸಿದರು.
ತಾಲೂಕಿನ ಹೆಬ್ಬಣಿ ಗ್ರಾ.ಪಂ ವ್ಯಾಪ್ತಿಯ ಎಚ್.ಬೈಯಪನಹಳ್ಳಿ ಗ್ರಾಮದ ರತ್ನಮ್ಮ ಎಂಬುವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು ಅವರಿಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿ ಮಾತನಾಡಿದರು. ಕ್ಯಾನ್ಸರ್ ರೋಗವು ಸಾಮಾನ್ಯವಾಗಿ ಬಡವರು , ಅನಕ್ಷರಸ್ಥರಲ್ಲಿ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದರಿಂದ ಚಿಕಿತ್ಸೆಗೆ ಆರ್ಥಿಕ ತೊಂದರೆಯಾಗುತ್ತಿರುತ್ತದೆ. ಇಂಥವರಿಗೆ ನನ್ನ ಕೈಯಲ್ಲಾದಷ್ಟು ಆರ್ಥಿಕ ನೆರವನ್ನು ನೀಡುವುದರ ಜೊತೆಗೆ ಅವರಿಗೆ ಧೈರ್ಯ ತುಂಬಾ ಕೆಲಸವನ್ನು ಮಾಡುತ್ತಿರುವುದಾಗಿ ಹೇಳಿದರು.
ಗ್ರಾ.ಪಂ ಅಧ್ಯಕ್ಷ ಭಾಸ್ಕರ್, ಗ್ರಾ.ಪಂ ಸದಸ್ಯರಾದ ಸೀನಪ್ಪ, ನಾಗಾರ್ಜುನ್ , ನಾರಾಯಣ, ಮುಖಂಡರಾದ ಕೊತ್ತೂರು ವೆಂಕಟರಮಣ, ರಮಣ, ವೆಂಕಟರೆಡ್ಡಿ, ಗುರುಮೂರ್ತಿ , ಅಶೋಕ್ ಸೇರಿದಂತೆ ಮತ್ತಿತರರು ಇದ್ದರು.