
- ಕೋಲಾರ: ಕಾಂಗ್ರೆಸ್ ಸರ್ಕಾರ ರೈತರಿಗೆ 72 ಸಾವಿರ ಕೋಟಿ ರೂಪಾಯಿ ಸಾಲಮನ್ನಾ ಮಾಡಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಇದೆ ಎಂದು ಕೆಪಿಸಿಸಿ ಕಿಸಾನ್ ಖೇತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಸಿ.ಸುಭಾಷ್ ಚಂದ್ರಗೌಡ ತಿಳಿಸಿದ್ದಾರೆ.
ಅವರು ನಗರದ ಕಾಂಗ್ರೆಸ್ ಭವನದಲ್ಲಿ ಕಿಸಾನ್ ಕೇತ್ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ದೇಶದಲ್ಲಿ ಈ ಹಿಂದೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಆಡಳಿತ ಅವಧಿಯಲ್ಲಿ ರೈತರಿಗೆ ಸಾಲ ಮನ್ನಾ ಮಾಡಿದ ಕೀರ್ತಿ ಸಲ್ಲಿಸುತ್ತದೆ ಅದೇ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿಗಳ ಜೊತೆಯಲ್ಲಿ ರೈತರ ಬೆಳೆ ಸಾಲದ ಬಡ್ಡಿ ಮನ್ನಾ ಮಾಡಲಾಗಿದೆ ಅದೇ ರೀತಿಯಲ್ಲಿ ರೈತರಿಗೆ ಇನ್ನೂ ಅನೇಕ ಯೋಜನೆಗಳನ್ನು ಜಾರಿಗೆ ತಂದು ರೈತರ ಪರ ಸರ್ಕಾರ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದಿಂದ ಯಾರಿಗೆ ಟಿಕೆಟ್ ನೀಡಿದರು ಕಿಸಾನ್ ಘಟಕ ಸಂಪೂರ್ಣವಾಗಿ ತೊಡಗಿಕೊಂಡು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಬೇಕು ಹಾಗೂ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ ಸಚಿವ ಕೆಎಚ್ ಮುನಿಯಪ್ಪ ಅವರ ಕೈ ಬಲಪಡಿಸಬೇಕೆಂದು ಪದಾಧಿಕಾರಿಗಳಿಗೆ ಸೂಚನೆ ನೀಡಿದರು.
ಕಿಸಾನ್ ಖೇತ್ ರಾಜ್ಯ ಉಪಾಧ್ಯಕ್ಷ ಬುಸನಹಳ್ಳಿ ಆಂಜನಪ್ಪ, ಸುಗುಟೂರು ವಿಶ್ವನಾಥ್, ತೊರದೇವನಹಳ್ಳಿ ನಾಗರಾಜ್, ಮಾರಪ್ಪ, ವಕೀಲ ಸದಾಶಿವ, ಕೃಷ್ಣಾರೆಡ್ಡಿ, ವಾಸು ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.