
ಮುಳಬಾಗಿಲು
ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಳಬಾಗಿಲಿನ ಕೆ.ವಿ.ರಾಮ್ ಪ್ರಸಾದ್, ಜಿಲ್ಲಾ ಕಾಂಗ್ರೆಸ್ ಖಜಾಂಚಿಯಾಗಿ 30 ವರ್ಷ ಸೇವೆ ಸಲ್ಲಿಸುವುದರ ಜೊತೆಗೆ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಾಗಿ ಪಕ್ಷದ ಸಂಘಟನೆಗೆ ಶ್ರಮಿಸಿದ್ದು ಈಗ ನಡೆಯುವ ವಿಧಾನ ಪರಿಷತ್ ಅಭ್ಯರ್ಥಿಯಾಗಿ ಆಯ್ಕೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನ ಗೃಹ ಕಚೇರಿಯಲ್ಲಿ ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮೇಲಾಗಾಣಿ ಸುಭಾಷ್ ಚಂದ್ರ ಗೌಡ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.
ಈ ವೇಳೆ ನಜೀರ್ ಅಹ್ಮದ್, ಕೆ.ವಿ.ರಾಮ್ ಪ್ರಸಾದ್ ಸೇರಿದಂತೆ ಮತ್ತಿತರರು ಇದ್ದರು.