
ಮುಳಬಾಗಿಲು
ತಾಲೂಕಿನ 50 ಹಾಲು ಡೇರಿ ಗಳಿಗೆ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 45 ಡೇರಿಗಳಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ ಎಂದು ಕೋಚಿಮಲ್ ನಿರ್ದೇಶಕ ಕಾಡೇನಹಳ್ಳಿ ನಾಗರಾಜ್ ತಿಳಿಸಿದರು.
ಅವರು ನಗರದ ಎಪಿಎಂಸಿ ಆವರಣದಲ್ಲಿರುವ ಶಿಬಿರ ಕಚೇರಿಯಲ್ಲಿ ಪುಣ್ಯಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಯ್ಕೆಯಾಗಿರುವ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಅಭಿನಂದಿಸಿ ಮಾತನಾಡಿದರು ತಾಲೂಕಿನಲ್ಲಿ ಬಹುತೇಕ ರೈತರು ಕೃಷಿ ಜೊತೆಗೆ ಹೈನುಗಾರಿಕೆ ವೃತ್ತಿಯನ್ನು ಮಾಡುತ್ತಿದ್ದು ಕೊಚ್ಚಿಮಲ್ ಹಾಲು ಉತ್ಪಾದಕರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ ಕೊಡುತ್ತಿದೆ ಎಂದು ತಿಳಿಸಿದರು.
ಡೇರಿ ಆಡಳಿತ ಮಂಡಳಿ ಅವರು ಪಕ್ಷಾತೀತವಾಗಿ ಸಂಘದ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು ಹಾಗೂ ಹೆಚ್ಚಿನ ಹಾಲು ಸರಬರಾಜುಗೆ ಒತ್ತು ನೀಡಬೇಕೆಂದು ತಿಳಿಸಿದರು.
ನೂತನ ಡೇರಿ ಅಧ್ಯಕ್ಷ ಜನಾರ್ದನ, ಉಪಾಧ್ಯಕ್ಷೆ ಶಾರದಮ್ಮ ವೆಂಕಟೇಶ್ , ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ.ವಿ.ಸಾಮೇಗೌಡ, ಜೆಡಿಎಸ್ ತಾಲೂಕು ಕಾರ್ಯದರ್ಶಿ ನಲ್ಲೂರು ರಘುಪತಿ ರೆಡ್ಡಿ, ಜೆಡಿಎಸ್ ಮುಖಂಡ ಎಂ.ಗೊಲ್ಲಹಳ್ಳಿ ಪ್ರಭಾಕರ್, ಗ್ರಾ ಪಂ ಮಾಜಿ ಅಧ್ಯಕ್ಷ ಗೊಲ್ಲಹಳ್ಳಿ ಜಗದೀಶ್, ಮುಖಂಡರಾದ ಕೊತ್ತೂರು ವೆಂಕಟರಮಣ, ಬಂಗವಾದಿ ಚೌಡರೆಡ್ಡಿ , ಹೆಬ್ಬಣಿ ಗ್ರಾ. ಪಂ ಅಧ್ಯಕ್ಷ ಭಾಸ್ಕರ್, ಸದಸ್ಯರಾದ ಬಂಗವಾದಿ ರಾಘುವ, ಕೋಡಿಹಳ್ಳಿ ನಾಗಾರ್ಜುನ, ಕಾರ್ಯದರ್ಶಿ ಪುಣ್ಯಹಳ್ಳಿ ಶಂಕರ್ ಇದ್ದರು.